ಗದಗ: ಹೋಳಿ (holi) ಹಬ್ಬ ಮುಗಿದ ನಂತರ ಕೆರೆಯಲ್ಲಿ ಈಜಲು ಹೋಗಿದ್ದ 16 ವರ್ಷದ ಬಾಲಕ ನೀರುಪಾಲಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ದೇವೇಂದ್ರ ಸಾವನ್ನಪ್ಪಿರುವ ಬಾಲಕ. ಸ್ಥಳೀಯರ ಸಹಾಯದಿಂದ ಬಾಲಕನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.