ಬೆಂಗಳೂರು: ಉಪಾಸಭಾಧ್ಯಕ್ಷ ರುದ್ರಪ್ಪ ಲಮಾಣಿ ತೆರಳುತ್ತಿದ್ದ ಕಾರು ಅಪಘಾತವಾಗಿ, ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಅಧಿವೇಶನ ಮುಗಿಸಿ ಹಾವೇರಿಯತ್ತ ರುದ್ರಪ್ಪ ಲಮಾಣಿ ತೆರಳುತ್ತಿದ್ದರು ಎನ್ನಲಾಗಿದೆ. ದಾರಿ ಮಧ್ಯೆ ಶಿರಾ ಬಳಿ ಮೂತ್ರ ವಿಸರ್ಜನೆಗಾಗಿ ಕಾರಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಜಖಂಡ ಆಗಿದ್ದು, ಶಾಸಕರು ಗಾಯಗೊಂಡಿದ್ದಾರೆ. ಅವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.