ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ನಿರ್ಧಾರವನ್ನು ಕ್ಯಾಬಿನೆಟ್ ನಲ್ಲಿ ಎತ್ತಿ ಹಿಡಿಯಲಾಗಿದೆ.
ಬಜೆಟ್ ನಲ್ಲಿ ಘೋಷಿಸಿದಂತೆ ವಿಧೇಯಕ ತರಲು ಕ್ಯಾಬಿನೆಟ್ ಸಮ್ಮತಿ ನೀಡಿದೆ. ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಇಲ್ಲಿಯವರೆಗೆ ಹಿಂದುಳಿದ, ಇತರೆ, ಹಿಂದುಳಿದ ವರ್ಗಗಳಿಗೆ ಮಾತ್ರ ಮೀಸಲಾತಿ ಇತ್ತು. ಈಗ ರಾಜ್ಯ ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ಕಲ್ಪಿಸಿದೆ.
ಅಲ್ಲದೇ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿ ರೂ. ವರೆಗಿನ ಮೊತ್ತ ವಿಸ್ತರಿಸಿ 2 ಕೋಟಿ ರೂ. ವರೆಗೆ ಮೀಸಲಾತಿಯ ಅವಕಾಶ ನೀಡಲಾಗಿದೆ. ಈ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಂಪುಟ ಅನುಮೋದನೆ ನೀಡಿದೆ.