ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.
ಗ್ರಾಮೀಣ ಭಾಗದಲ್ಲಿ ಇ- ಖಾತಾ ನೀಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಅನುಮೋದನೆ ನೀಡಿದೆ.
ವಿಧೇಯಕ ಅಂಗೀಕಾರ ನೀಡಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣಾ ವ್ಯಾಪ್ತಿಯಲ್ಲಿನ ಮನೆ ನಿವೇಶನಗಳು ಸಕ್ರಮವಾಗಲಿದ್ದು, ಜನ ಸಂತಸ ಪಡುವಂತಾಗಿದೆ.