ಬೆಂಗಳೂರು: ಲೋಕಸೇವಾ ಆಯೋಗದ ಸುಧಾರಣಾ ಕ್ರಮಗಳ ಬಗ್ಗ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆದಿದೆ.
ಕೆಪಿಎಸ್ಸಿಯಲ್ಲಿ ಲೋಪ ದೋಷಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆದಿದೆ. ಈ ಹಿನ್ನೆಲೆಯಲ್ಲಿ ಲೋಕಸೇವಾ ಆಯೋಗದ ಪರೀಕ್ಷೆ, ಆಡಳಿತ ಸುಧಾರಣೆಗೆ ಪ್ರತ್ಯೇಕ ಸಮಿತಿ ರಚನೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಸಮಿತಿ ಶಿಫಾರಸುಗಳನ್ನು ಪಾಲನೆ ಮಾಡುವ ಬಗ್ಗೆಯೂ ಕ್ಯಾಬಿನೆಟ್ ನಲ್ಲಿ ಸಮಾಲೋಚನೆ ನಡೆಯಿತು.
ಲೋಕಸೇವಾ ಆಯೋಗದ ಸಮಗ್ರ ಸುಧಾರಣೆಗೆ ಕ್ರಮ ವಹಿಸಲು ಕ್ಯಾಬಿನೆಟ್ ನಲ್ಲಿ ಚರ್ಚೆಯಾಯಿತು. ಈ ಹಿನ್ನೆಲೆಯಲ್ಲಿ ಮುಂದಿನ ಅಧಿವೇಶನದ ಹೊತ್ತಿಗೆ ಸಮಗ್ರ ಸುಧಾರಣಾ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.