ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದೆ. ಈ ಮಧ್ಯೆ ಹಲವೆಡೆ ಪೂರ್ವ ಮುಂಗಾರು ಎಂಟ್ರಿ ಕೊಡುತ್ತಿದ್ದು, ಧರೆ ತಂಪಾಗಿಸುತ್ತಿದೆ. ಮಾ. 18ರಿಂದ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ಮೋಡ ಕವಿದ ವಾತಾವರಣ ಇರಲಿದೆ. ಮಾ.17ರಂದು ಇದೇ ರೀತಿಯ ಹವಾಮಾನ ಇರಲಿದ್ದು, ಮಾ.18 ರಿಂದ 20ರವರೆಗೆ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 40.2 ಡಿ.ಸೆ ಉಷ್ಣಾಂಶ ದಾಖಲಾಗಿದೆ. ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 17.6 ಡಿ.ಸೆ. ದಾಖಲಾಗಿದೆ. ಮಾರ್ಚ್ 14 ರಿಂದ 20ರ ವರೆಗೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.