ಬೆಂಗಳೂರು: ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ಅರೆಸ್ಟ್ ಆಗಿ ಜೈಲು ಪಾಲಾಗಿದ್ದು, ಈಗ ಮಲತಂದೆ ಡಿಜಿಪಿ ರಾಮಚಂದ್ರರಾವ್ ಗೂ ಸಂಕಷ್ಟ ಶುರುವಾಗಿದೆ.
ಸ್ಮಗ್ಲಿಂಗ್ ಕೇಸ್ ನಲ್ಲಿ ಈಗ ಡಿಜಿಪಿ ರಾಮಚಂದ್ರರಾವ್ ವಿಚಾರಣೆ ಎದುರಿಸುತ್ತಿದ್ದಾರೆ. ಈಗಾಗಲೇ ಗುರುವಾರ ರಾಮಚಂದ್ರರಾವ್ ವಿಚಾರಣೆ ಎದುರಿಸಿದ್ದು, ಇಂದು ಕೂಡ ಅವರ ವಿಚಾರಣೆ ನಡೆಯಲಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ಐಎಎಸ್ ಅಧಿಕಾರಿ ಗೌರವ್ ಗುಪ್ತಾ, ಡಿಐಜಿ ವಂಶಿಕೃಷ್ಣ ಅವರು ರಾಮಚಂದ್ರರಾವ್ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ, ಒಂದು ವಾರದಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿದೆ. ಈಗಾಗಲೇ ಸರ್ಕಾರ ಆದೇಶ ಹೊರಡಿಸಿ, 5 ದಿನ ಕಳೆದಿದೆ. ಹೀಗಾಗಿ ಇಂದು ಮತ್ತು ನಾಳೆ ವಿಚಾರಣೆ ನಡೆಯಲಿದೆ. ಆನಂತರ ಗೌರವ್ ಗುಪ್ತಾ ಅವರಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ.