ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಉಪಸಭಾಪತಿ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಶುಕ್ರವಾರ ಬಜೆಟ್ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ದಾವಣಗೆರೆ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಕಾರ್ಯಕರ್ತರಲ್ಲಿ ಆತಂಕ ವ್ಯಕ್ತವಾಗುತ್ತಿದೆ.
ರುದ್ರಪ್ಪ ಲಮಾಣಿ ಹಾವೇರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿಕ ಕಾರನ್ನು ಸೈಡಿಗೆ ಹಾಕಿ ಇಳಿದಿದ್ದಾರೆ.
ಅದೇ ವೇಳೆ ವೇಗವಾಗಿ ಬಂದ ಬೈಕ್ ವೊಂದು ರುದ್ರಪ್ಪ ಲಮಾಣಿ ಅವರಿಗೆ ಗುದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಹಣೆ, ಹಲ್ಲು, ಗದ್ದ ಮತ್ತು ಬಲ ಮೊಣಕಾಲಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಮಾತ್ರ ಆರೋಗ್ಯ ಸ್ಥಿರವಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದರು. ಇದೀಗ ದಿಢೀರ್ ಬೆಂಗಳೂರಿಗೆ ಶಿಫ್ಟ್ ಮಾಡಿದ್ದು, ಅವರ ಬೆಂಬಲಿಗರ ಆತಂಕಕ್ಕೆ ಕಾರಣವಾಗುತ್ತಿದೆ.