ಚಿಂತಾಮಣಿ: ವ್ಹೀಲಿಂಗ್ ಪುಂಡರಿಂದಾಗಿ ಯುವತಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೆಂಗಳೂರು ಮುಖ್ಯ ರಸ್ತೆಯ ಶ್ರೀನಿವಾಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವ್ಹೀಲಿಂಗ್ ಪುಂಡರು ವ್ಹೀಲಿಂಗ್ ಮಾಡುತ್ತ ಯುವತಿಯರಿಗೆ ಡಿಕ್ಕಿ ಹೊಡೆಸಿದ್ದಾರೆ. ಪರಿಣಾಮವಾಗಿ ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನು ಗಮನಿಸಿದ ಸ್ಥಳೀಯರು ಪುಂಡರನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಭಾಗದಲ್ಲಿ ಪ್ರತಿ ದಿನ ವ್ಹೀಲಿಂಗ್ ಮಾಡುತ್ತಾರೆ. ಆದರೂ ಪೊಲೀಸರು ಮೌನ ವಹಿಸಿ ಕುಳಿತಿದ್ದರು. ಇದರಿಂದಾಗಿ ಈ ಘಟನೆ ನಡೆಯುವಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ವ್ಹೀಲಿಂಗ್ ಪುಂಡರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.