ಪುತ್ತೂರು: ಖ್ಯಾತ ಚಿತ್ರನಟ ಪ್ರಭುದೇವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವಸ್ಥಾನದಲ್ಲಿ ಮಹಾಭಿಷೇಕ ಪೂಜೆ ನೆರವೇರಿಸಿದ್ದಾರೆ.
ಪತ್ನಿ ಸಮೇತ ಪ್ರಭುದೇವ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದಿದ್ದಾರೆ. ಈ ವೇಳೆ ದೇವಸ್ಥಾನದ ವತಿಯಿಂದ ಪ್ರಭುದೇವ ಕುಟುಂಬಕ್ಕೆ ಗೌರವ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರ್ನಾಟಕದ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಆಗಮಿಸಿದ್ದು, ಅಲ್ಲಿನ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿತ್ತು. ಹಲವರು ಈ ವೇಳೆ ಪ್ರಭುದೇವ ಅವರನ್ನು ನೋಡಿ ಖುಷಿ ಪಟ್ಟಿದ್ದಾರೆ.