ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ ಸಿ) ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) 357 ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಪುರುಷರು ಹಾಗೂ ಹೆಣ್ಣುಮಕ್ಕಳು ಅರ್ಜಿ ಸಲ್ಲಸಿಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮಾರ್ಚ್ 25 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ ಗಡಿ ಭದ್ರತಾ ಪಡೆ (ಬಿಎಸ್ಎಫ್), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್), ಇಂಡೊ-ಟೆಬೆಟನ್ ಗಡಿ ಪೊಲೀಸ್ (ಐಟಿಬಿಪಿ), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್), ಮತ್ತು ಸಶಸ್ತ್ರ ಸೀಮಾ ಬಲ (ಎಸ್ ಎಸ್ ಬಿ) ಪಡೆಗಳಲ್ಲಿ ಗ್ರೂಪ್ ಎ ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯಾವ ವಿಭಾಗದಲ್ಲಿ ಎಷ್ಟು ಹುದ್ದೆ ಖಾಲಿ?
ಸಿಆರ್ ಪಿಎಫ್ 204
ಸಿಐಎಸ್ಎಫ್ 92
ಐಟಿಬಿಪಿ 04
ಎಸ್ ಎಸ್ ಬಿ 33
ವಯಸ್ಸಿನ ಮಿತಿ ಎಷ್ಟು?
ಕನಿಷ್ಠ 20 ವರ್ಷ ಆಗಿರುವ, ಗರಿಷ್ಠ ವಯಸ್ಸು 25 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 3 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು https://upsconline.nic.in/upsc/OTRP/ ಗೆ ಭೇಟಿ ನೀಡಿ. ಅರ್ಜಿ ಶುಲ್ಕ 200 ರೂ. ಪಾವತಿಸಿ, ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.