ಮೈಸೂರು: ಕಲುಷಿತ ಆಹಾರ (Food Poison) ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಕಲುಷಿತ ಆಹಾರ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಮೈಸೂರಿನ (Mysuru) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ನಮೀಬ್ ಮಾಂತೆ ಎನ್ನಲಾಗಿದೆ. ಈ ಮೂಲಕ ಸಾವನ್ನಪ್ಪಿದ ವಿದ್ಯಾರ್ಥಿಗಳ ಸಂಖ್ಯೆ 2ಕ್ಕೆ ಏರಿಕೆ ಕಂಡಿದೆ. ಇನ್ನುಳಿದಂತೆ ಚಿಕಿತ್ಸೆ ಪಡೆಯುತ್ತಿರುವ 46 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ.
ಮಳವಳ್ಳಿ (Malavalli) ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳ ಪೈಕಿ 6ನೇ ತರಗತಿ ವಿದ್ಯಾರ್ಥಿ, ಮೇಘಾಲಯದ ಕಿರ್ಶನ್ ಲ್ಯಾಂಗ್ (13) ಸಾವನ್ನಪ್ಪಿದ್ದ. ಈ ಪ್ರಕರಣ ಭೇದಿಸುವ ನಿಟ್ಟಿನಲ್ಲಿ ಮಳವಳ್ಳಿ ಡಿವೈಎಸ್ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಆಕಸ್ಮಿಕವಾಗಿ ಆಹಾರ ಪದಾರ್ಥಗಳಿಂದ ಫುಡ್ ಪಾಯಿಸನ್ ಆಗಿದ್ಯಾ? ಅಥವಾ ಉದ್ದೇಶ ಪೂರ್ವಕವಾಗಿ ಯಾರೋ ಊಟವನ್ನು ಕಲುಷಿತ ಮಾಡಿದ್ದಾರಾ? ಎಂಬುವುದರ ಕುರಿತು ತನಿಖೆ ನಡೆಯುತ್ತಿದೆ.