ಬೆಂಗಳೂರು:ಕರ್ನಾಟಕ ಬಂದ್ ಮಾರ್ಚ್ 22ರಂದು (Karnataka Bandh) ಫಿಕ್ಸ್ ಆಗಿದೆ. ಗಡಿಯಲ್ಲಿ (Belagavi) ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.
ಬಂದ್ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್’ಗೆ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಬಂದ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು.
ಸಭೆಯ ನಂತರ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಂದ್ ಆಗುವುದು ನಿಶ್ಚಿತ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ. ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಾರ್ಚ್ 22ರಂದು ಯಾರು ಮೆಟ್ರೋ ಹತ್ತಬೇಡಿ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತಾನಾಡಿದ್ದೇವೆ. ಅವತ್ತು ಬಸ್ ಓಡಿಸಬಾರದೆಂದು ಹೇಳಿದ್ದೇವೆ. ಮಂತ್ರಿ, ಸಿಎಂ ಕಾರಿನ ಚಾಲಕರೇ ಆಗಿರಲಿ, ಮಾನ ಮರ್ಯಾದೆ ಗೌರವ ಅಭಿಮಾನ ಸ್ವಾಭಿಮಾನಕ್ಕೆ ಅಂದು ಗಾಡಿ ಹತ್ತಬೇಡಿ. ಬೆಳಗಾವಿಯಿಂದ ಎಂಇಎಸ್ ಪುಂಡರನ್ನು ಒದ್ದು ಓಡಿಸಬೇಕು ಎಂದು ಕಿಡಿಕಾರಿದ್ದಾರೆ.
ಈ ಬಂದ್ಗೆ ಸಾರಿಗೆ ನೌಕರರ ಕೂಟ, ಕನ್ನಡ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ.