ಬೆಂಗಳೂರು: ನಟ ಶಿವರಾಜ್ ಕುಮಾರ್ ಮನೆಗೆ ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇತ್ತೀಚೆಗಷ್ಟೇ ನಟ ಶಿವಣ್ಣ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡಿದ್ದಾರೆ. ಹೀಗಾಗಿ ನಟ ಯಶ್ ಹಾಗೂ ರಾಧಿಕಾ ಅವರು ಶಿವಣ್ಣ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಶಿವರಾಜ್ ಕುಮಾರ್ ಅವರ ಮಾನ್ಯತಾ ಟೆಕ್ ಪಾರ್ಟ್ ನ ನಿವಾಸಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಇಂದು ಸಂಜೆ 5 ಗಂಟೆ ಸುಮಾರಿಗೆ ಆಗಮಿಸಿ, ಮಾತು-ಕತೆ ನಡೆಸಿದ್ದಾರೆ.
ಶಿವಣ್ಣ ಮರಳಿ ಬರುತ್ತಿದ್ದಂತೆ ಹಲವರು ಮನೆಗೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ನಟ ಸುದೀಪ್ ಸೇರಿದಂತೆ ಹಲವು ನಟರು ಶಿವಣ್ಣನ ಮನೆಗೆ ಆಗಮಿಸಿದ್ದರು. ಈಗ ಯಶ್ ಕೂಡ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ನಟ ಯಶ್ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವುದರಿಂದ ಬ್ಯೂಸಿಯಾಗಿದ್ದರು.