ಮೈಸೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆಯಲ್ಲಿ ನಗರದಲ್ಲಿ ಸಾರಿಗೆ ಬಸ್‌ಗಳನ್ನು (KSRTC Bus) ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನಾಕಾರರು ಬಸ್ ನಿಲ್ದಾಣದ ಹತ್ತಿರ ಕೆಎಸ್‌ಆರ್‌ಟಿಸಿ ಬಸ್ ಗೆ ಅಡ್ಡ ನಿಂತು ಪ್ರತಿಭಟನೆ ನಡೆಸುತ್ತಿದ್ದರು. ಇದರಿಂದಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಮುಂದೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರು (Mysuru) ಗ್ರಾಮಾಂತರ ಬಸ್ ನಿಲ್ದಾಣದ ಎರಡು ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.