ಬೆಂಗಳೂರು: ಕೇಂದ್ರ ಸರ್ಕಾರದ ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿಯಲ್ಲಿ ಪ್ರಾಜೆಕ್ಟ್ ಸೈಂಟಿಸ್ಟ್ ಬಿ ಹಾಗೂ ಪ್ರಾಜೆಕ್ಟ್ ಸೈಂಟಿಸ್ಟ್ ಸಿ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಡಿಎ ವೆಬ್ ಪೋರ್ಟಲ್ ಆಗಿರುವ ada.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯ ಮಾಹಿತಿ ಕೂಡ ಇದೇ ವೆಬ್ ಸೈಟ್ ನಲ್ಲಿ ಸಿಗಲಿದೆ. ಬಿಇ ಹಾಗೂ ಬಿಟೆಕ್ ಪದವಿ ಪಡೆದವರು ಅರ್ಜಿ ಸಲ್ಲಿಸಿ, ಒಳ್ಳೆಯ ಸಂಬಳದ ನೌಕರಿ ಗಿಟ್ಟಿಸಿಕೊಳ್ಳಬಹುದಾಗಿದೆ.
ಯಾವ ಹುದ್ದೆಗಳು ಎಷ್ಟು?
ಪ್ರಾಜೆಕ್ಟ್ ಸೈಂಟಿಸ್ಟ್ ಬಿ ವಿಭಾಗದಲ್ಲಿ 105 ಹುದ್ದೆಗಳು ಖಾಲಿ ಇದ್ದರೆ, ಪ್ರಾಜೆಕ್ಟ್ ಸೈಂಟಿಸ್ಟ್ ಸಿ ವಿಭಾಗದಲ್ಲಿ 32 ಹುದ್ದೆಗಳು ಖಾಲಿ ಇವೆ. ಪ್ರಾಜೆಕ್ಟ್ ಸೈಂಟಿಸ್ಟ್ ಬಿ ಹುದ್ದೆಗೆ ನೇಮಕಾತಿ ಹೊಂದಿದವರಿಗೆ 90,789 ರೂಪಾಯಿವರೆಗೆ ಸಂಬಳ ದೊರೆಯಲಿದೆ. ಹಾಗೆಯೇ, ಪ್ರಾಜೆಕ್ಟ್ ಸೈಂಟಿಸ್ಟ್ ಸಿ ಹುದ್ದೆಗೆ ಆಯ್ಕೆಯಾದವರಿಗೆ 1,08,073 ರೂಪಾಯಿವರೆಗೆ ಸಂಬಳ ನಿಡಲಾಗುತ್ತದೆ.
ಅರ್ಹತೆಗಳು ಏನೇನು?
ಬಿಇ ಹಾಗೂ ಬಿಟೆಕ್ ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರಬೇಕು. ಪ್ರಾಜೆಕ್ಟ್ ಸೈಂಟಿಸ್ಟ್ ಬಿ ಹುದ್ದೆಗೆ ಹಾಗೂ ಸಿ ಹುದ್ದೆಗೆ ಕನಿಷ್ಠ 3 ವರ್ಷ ಕೆಲಸದ ಅನುಭವ ಹೊಂದಿರಬೇಕು. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆಣಡ್ ಕಂಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಆ್ಯಂಡ್ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಮೆಟಾಲರ್ಜಿ ಎಂಜಿನಿಯರಿಂಗ್, ಏರೋನಾಟಿಕಲ್ ಎಂಜಿನಿಯರಿಂಗ್ ವಿಷಯಗಳಲ್ಲಿ ಶಿಕ್ಷಣ ಪಡೆದಿರಬೇಕು. ಮಾಸ್ಟರ್ ಡಿಗ್ರಿಗಳಾದ ಎಂಎಸ್ಸಿ , ಎಂಟೆಕ್, ಪಿಎಚ್.ಡಿ ಪಾಸ್ ಮಾಡಿದ್ದು, ಮೂರು ವರ್ಷ ಕೆಲಸದ ಅನುಭವ ಇದ್ದವರಿಗೂ ಆದ್ಯತೆ ನೀಡಲಾಗುತ್ತದೆ.
ವಯಸ್ಸಿನ ಮಿತಿ ಎಷ್ಟು?
ಪ್ರಾಜೆಕ್ಟ್ ಸೈಂಟಿಸ್ಟ್ ಬಿ ಹುದ್ದೆಗೆ 35 ವರ್ಷ ವಯಸ್ಸು ಮೀರಿರಬಾರದು. ಪ್ರಾಜೆಕ್ಟ್ ಸೈಂಟಿಸ್ಟ್ ಸಿ ಹುದ್ದೆಗೆ 40 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಅರ್ಜಿ ಸಲ್ಲಿಸಿ ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಆದವರಿಗೆ ಅಂತಿಮವಾಗಿ ಪರ್ಸನಲ್ ಇಂಟರ್ ವ್ಯೂ ನಡೆಸಿ ಆಯ್ಕೆ ಮಾಡಲಾಗುತ್ತದೆ. ಏಪ್ರಿಲ್ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.