ಕೋಲಾರ: ಪ್ರಿಯತಮೆ ಮುಂದೆಯೇ ರೌಡಿಶೀಟರ್ ಬರ್ಬರ ಹತ್ಯೆ ನಡೆಸಿರುವ ಘಟನೆಯೊಂದು ನಡೆದಿದೆ.
ಕೋಲಾರದ (Kolara news) ಕೆಜಿಎಫ್ ನಲ್ಲಿ ರೌಡಿಶೀಟರ್ (Rowdy Sheeter) ನನ್ನು ಕೊಚ್ಚಿ (killed) ಕೊಲೆ (Murder Case) ಮಾಡಲಾಗಿದೆ. ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ತೇನ್ ಕೊಲೆಯಾದ ವ್ಯಕ್ತಿ. ಆತ ಪ್ರಿಯತಮೆ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಪ್ರಿಯತಮೆ ಜೊತೆ ಕಾಮಸಮುದ್ರಕ್ಕೆ ಹೋಗುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಘಟನೆಯಲ್ಲಿ ಅದೃಷ್ಟವಶಾತ್ ಪ್ರಿಯತಮೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊಲೆಯಾಗಿರುವ ಶಿವಕುಮಾರ್ ವಿರುದ್ಧ 3 ಕೊಲೆ ಮತ್ತು ಹಲ್ಲೆ ಪ್ರಕರಣಗಳು ಇದ್ದವು ಎನ್ನಲಾಗಿದೆ.