ಹಾಸನ: ಫೋಟೋಶೂಟ್ (Photo Shoot) ಮಾಡಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಯುವಕನೋರ್ವ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಹಾಸನ (Hassan) ತಾಲ್ಲೂಕಿನ ಹಾಲುವಾಗಿಲು ಗ್ರಾಮದಲ್ಲಿ ನಡೆದಿದೆ. ನಾಗೇಂದ್ರ (19) ಸಾವನ್ನಪ್ಪಿದ ಯುವಕ. ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಮಂಜುನಾಥ್ ಕೆಲಸ ಮುಗಿಸಿ ಹಾಲುವಾಗಿಲು ಬಳಿ ಹರಿಯುವ ನೀರು ನೋಡಲು ಹೋಗಿದ್ದರು. ಈ ಸಂದರ್ಭದಲ್ಲಿ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದಾರೆ. ಆಗ ನಾಗೇಂದ್ರ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಅದೃಷ್ಟವಶಾತ್ ಮಂಜುನಾಥ್ ಅಪಾಯದಿಂದ ಪಾರಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ (Hassan v) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.