ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಪಿ ಸೇರಿದಂತೆ ಎಎಸ್ ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಈಶಾನ್ಯ ವಿಭಾಗದ ಸೈಬರ್ ಕ್ರೈಂ(ಸೆನ್) ಠಾಣೆಯ ಎಸಿಪಿ ತನ್ವೀರ್ ಎಸ್.ಆರ್, ಎಎಸ್ ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸೈಬರ್ ಕ್ರೈಂ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರ ಬಳಿ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದಾರೆ.
ಆರೋಪಿ ಬಳಿ ಹಣ ಪಡೆಯುತ್ತಿದ್ದ ಸಂದರ್ಭದಲ್ಲೇ ಸೆನ್ ಠಾಣಾ ಎಸಿಪಿ ತನ್ವೀರ್ ಹಾಗೂ ಎಎಸ್ ಐ ಕೃಷ್ಣಮೂರ್ತಿ ಬಲೆಗೆ ಬಿದ್ದಿದ್ದು, ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿತರು, ದೂರುದಾರರ ಬಳಿ 4 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮುಂಗಡವಾಗಿ 2 ಲಕ್ಷ ರೂ. ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ. ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.