ಬೆಂಗಳೂರು: ಸಾರಿಗೆ ನೌಕರರು (Transport Employees) ಮತ್ತೊಮ್ಮೆ ಸರ್ಕಾರದ ವಿರುದ್ಧ ರಸ್ತೆಗೆ ಇಳಿಯಲು ಮುಂದಾಗಿದ್ದಾರೆ.
ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ಭರವಸೆಯ ನಂತರ ಹಿಂದೆ ಸರಿದಿದ್ದ ನೌಕರಸ್ಥರು, ಭರವಸೆ ಈಡೇರದ ಹಿನ್ನೆಲೆಯಲ್ಲಿ ಈಗ ಮತ್ತೊಮ್ಮೆ ಹೋರಾಟಕ್ಕೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಈ ಹಿಂದೆ ನೀಡಿದ್ದ ಭರವಸೆ ಈಡೇರಿಸಿಲ್ಲ. ಹೀಗಾಗಿ ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.
ಏಪ್ರಿಲ್ 15 ರಂದು ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಧರಣಿ ಸತ್ಯಾಗ್ರಹದ ನಡೆಸಲಾಗುವುದು ಎಂದು ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದರು. ಆದರೆ, ಆ ವೇಳೆ ಬೇಡಿಕೆ ಈಡೇರಿಸುವ ಭರವಸೆ ನೀಡಲಾಗಿತ್ತು. ಹೀಗಾಗಿ ಹೋರಾಟ ಕೈ ಬಿಡಲಾಗಿತ್ತು. ಆದರೆ, ಇದುವರೆಗೂ ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಅವರು ಮತ್ತೆ ಬೀದಿಗೆ ಇಳಿಯಲು ಮುಂದಾಗಿದ್ದಾರೆ. ಏಪ್ರಿಲ್ 15 ರ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸುವ ಸುಳಿವು ನೀಡಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳೇನು?
- ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡಬೇಕು (7 ನೇ ವೇತನ ಆಯೋಗ ಜಾರಿಯಾಗಬೇಕು)
- 38 ತಿಂಗಳ ವೇತನ ಹಿಂಬಾಕಿ ನೀಡಬೇಕು.
- ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು.
-2021 ರ ವೇಳೆಯಲ್ಲಿ ಮುಷ್ಕರದ ವಜಾಗೊಂಡ ನೌಕರರ ಸಮಸ್ಯೆಯನ್ನು ಬಗೆಹರಿಸಬೇಕು