ಬೆಂಗಳೂರು: ಹಾಲಿನ ಬೆಲೆ ಏರಿಕೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ಸಂಘ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದೆ.
ಇತ್ತೀಚಿಗೆ ಹಾಲಿನ ದರ ಏರಿಕೆಯಾಗುತ್ತದೆ ಎಂಬ ಮಾತುಗಳು ಚರ್ಚೆಯಲ್ಲಿದ್ದವು. ಬೆಲೆ ಏರಿಸುವ ಕುರಿತು ಕೆಎಂಎಫ್ ಸರ್ಕಾರಕ್ಕೆ ಮನವಿ ಕೂಡ ಸಲ್ಲಿಸಿತ್ತು. ಸರಣಿ ಸಭೆಗಳು ಕೂಡ ನಡೆದಿದ್ದವು. ಆದರೆ, ಸರ್ಕಾರ ಬೆಲೆ ಏರಿಕೆಗೆ ಬ್ರೇಕ್ ಹಾಕಿದೆ. ಈ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ಶ್ಲಾಘಿಸಿದ್ದಾರೆ.
ಈಗಾಗಲೇ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇದರ ಬೆನ್ನಲ್ಲೇ ಹಾಲಿನ ದರ ಹೆಚ್ಚಳವಾಗುತ್ತದೆ ಎನ್ನುವ ಆತಂಕಕ್ಕೆ ಸಿಎಂ ಬ್ರೇಕ್ ಹಾಕಿದ್ದಾರೆ. ಇದು ಹೋಟೆಲ್ ಉದ್ಯಮಕ್ಕೆ ಅನುಕೂಲವಾಗಿದೆ. ಒಂದು ವೇಳೆ ಹಾಲಿನ ದರ ಹೆಚ್ಚಳವಾಗಿದ್ದರೆ ಹೋಟೆಲ್ ಉದ್ಯಮಕ್ಕೆ ಹೊಡೆತ ಬೀಳುತ್ತಿತ್ತು. ಅದರಲ್ಲೂ ನಂದಿನಿ ಹಾಲಿನ ದರ ಏರಿಕೆ ಮಾಡಿದ್ದರೆ ಹೋಟೆಲ್ ಉದ್ಯಮಕ್ಕೆ ತೀವ್ರ ಹೊಡೆತ ಬೀಳುತ್ತಿತ್ತು. ಹೀಗಾಗಿ ಹೋಟೆಲ್ ಮಾಲೀಕರ ಸಂಘ ಸಿಎಂಗೆ ಮನವಿ ಮಾಡಿ ಕೋರಿತ್ತು. ಈಗ ಸಿಎಂ ಸ್ಪಂದನೆಗೆ ಧನ್ಯವಾದ ಅರ್ಪಿಸಿದೆ.