ತುಮಕೂರು: ಟ್ರ್ಯಾಕ್ಟರ್ ಹರಿದು ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ತುಮಕೂರು (Tumakuru) ಜಿಲ್ಲೆಯ ಪಾವಗಡ (Pavagada) ತಾಲೂಕಿನ ತಿಮ್ಮನಹಳ್ಳಿ (Timmanahalli) ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರುಣ್ ಎಂಬ ಬಾಲಕ ಸಾವನ್ನಪ್ಪಿದ್ದಾನೆ.
ವರುಣ್ ಮನೆಯ ಮುಂದೆ ಆಡುತ್ತಿದ್ದ ಸಂದರ್ಭದಲ್ಲಿ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಂದಿದ್ದು, ಮಗುವನ್ನು ಗಮನಿಸದೆ, ಚಾಲಕ ಚಲಾಯಿಸಿದ್ದಾನೆ. ಪರಿಣಾಮ ಮಗು ಸಾವನ್ನಪ್ಪಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವೈಎನ್ ಹೊಸಕೋಟೆ (YN Hosakote) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ನಡೆದಿದೆ.