ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿನ ಯು.ಆರ್. ರಾವ್ ಉಪಗ್ರಹ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಬುಧವಾರ ರಾತ್ರಿ 10 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ರಸ್ತೆಯಲ್ಲಿ ಬರುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬಸ್ ಹರಿದಿದೆ. ಪರಿಣಾಮ ಇಬ್ಬರೂ ಪಾದಾಚಾರಿಗಳು ಸಾವನ್ನಪ್ಪಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ. ಕೆಎ 51 ಎಜೆ 6167 ನಂಬರ್ ನ ಬಸ್ ನಿಂದ ಈ ದುರ್ಘಟನೆ ನಡೆದಿದೆ. ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಹೆಚ್ಎಎಲ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಎಎಲ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.