ಬೆಂಗಳೂರು ಗ್ರಾಮಾಂತರ: ಕಿರಾತಕನೊಬ್ಬ ಪತ್ನಿ ಕೊಲೆ ಮಾಡಿ ದೇಹ ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭಯಾನಕ ಘಟನೆ ನಗರದಲ್ಲಿ ನಡೆದಿದೆ.
ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ ಆರೋಪಿ. ಗೌರಿ ಅನಿಲ್ ಸಾಂಬೆಕರ್ ಮೃತ ಪತ್ನಿ. ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪೋನ್ ಕರೆ ಮಾಡಿ ಆರೋಪಿ ರಾಕೇಶ್ ಸಾವಿನ ಸುದ್ದಿಯನ್ನು ಕೂಡ ಹೇಳಿದ್ದಾನೆ ಎನ್ನಲಾಗಿದೆ.
ಈ ಕುರಿತು ಮಹಾರಾಷ್ಟ್ರ ಪೊಲೀಸರಿಂದ ಹುಳಿಮಾವು ಪೋಲಿಸರಿಗೆ ಮಾಹಿತಿ ಸಿಕ್ಕಿದೆ. ಮಾಹಿತಿ ಆಧರಿಸಿ ಹುಳಿಮಾವು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಕಂಪನಿಯಲ್ಲಿ ದಂಪತಿ ಕೆಲಸ ಮಾಡಿಕೊಂಡಿದ್ದರು. ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದ ಕೆಲಸ ಮಾಡುತ್ತಿದ್ದರು. ಪತ್ನಿಯನ್ನು ಕೊಲೆ ಮಾಡಿ ನಂತರ ಸ್ನೇಹಿತನಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾನೆ. ಈಗ ಹುಳಿಮಾವು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.