ಬೆಂಗಳೂರು: ಜ್ಯೂಸ್ ಎಂದು ಭಾವಿಸಿ ಬಾಲಕಿಯೋರ್ವಳು ವಿಷ ಸೇವಿಸಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.
ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 9 ನೇ ತರಗತಿ ವಿದ್ಯಾರ್ಥಿನಿ ನಿಧಿ ಕೃಷ್ಣ (14) ಸಾವನ್ನಪ್ಪಿರುವ ದುರ್ದೈವಿ ಬಾಲಕಿ. ಬಾಲಕಿಯು ಉತ್ತಮ ಆರೋಗ್ಯಕ್ಕಾಗಿ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ, ಕುಟುಂಬಸ್ಥರು ಅಲೋವೆರಾ ಡಬ್ಬದಲ್ಲಿ ಹರ್ಬಿಸೈಡ್ ಔಷಧ ತುಂಬಿಟ್ಟಿದ್ದಾರೆ.
ಹರ್ಬಿಸೈಡ್ ಔಷಧವನ್ನು ಗಿಡಗಳಿಗೆ ಬಳಕೆ ಮಾಡಲಾಗುತ್ತದೆ. ಆದರೆ, ವಿದ್ಯಾರ್ಥಿನಿಯು ಅಲೋವೆರಾ ಎಂದು ಭಾವಿಸಿ ವಿಷ ಸೇವಿಸಿದ್ದಾರೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ಬಾಲಕಿ ಸಾವನ್ನಪ್ಪಿದ್ದಾಳೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.