ನವದೆಹಲಿ: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 7 ಜನ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ.
7 ಜನ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ (Supreme Court) ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಹೈಕೋರ್ಟ್ (High Court) ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗುವಂತಿದೆ.
ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಮಾ.18ಕ್ಕೂ ಮುನ್ನ ನಡೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಲು ಹಿರಿಯ ವಕೀಲ ಕಪಿಲ್ ಸಿಬಲ್ ರನ್ನು ದರ್ಶನ್ ಕುಟುಂಬ ನೇಮಿಸಿದೆ. ನಟ ದರ್ಶನ್ ಗೆ ಪ್ರಕರಣದಲ್ಲಿ 131 ದಿನಗಳ ಜೈಲುವಾಸದ ನಂತರ ಜಾಮೀನು ಸಿಕ್ಕಿತ್ತು.