ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಲಾಬಿ ಶುರುವಾದ ಹಿನ್ನೆಲೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಹೈಕಮಾಂಡ್ ಭೇಟಿ ಮಾಡಿದ್ದಾರೆ.
ಈಶ್ವರ್ ಖಂಡ್ರೆ ಈ ಹಿಂದೆ ನಾನು ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಂತಾ ಹೇಳಿದ್ದರು. ಈ ಮಧ್ಯೆ ಅವರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನಾಯಕ ಸುರ್ಜೇವಾಲ ಜತೆ ಒಂದು ಗಂಟೆಗಳ ಕಾಲ ಖಂಡ್ರೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಸಿದ್ದರಾಮಯ್ಯ ಬಣದಿಂದ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಬೆನ್ನಲ್ಲೇ ದೆಹಲಿಗೆ ಹಾರಿರುವ ಈಶ್ವರ್ ಖಂಡ್ರೆ, ತಮ್ಮ ಪರ ಬ್ಯಾಟಿಂಗ್ ಮುಂದುವರೆಸಿದ್ದಾರೆ.