ಹುಬ್ಬಳ್ಳಿ: ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ. ಅತ್ಯಾಚಾರಿಗಳು, ಕೊಲೆಗಡುಕರು, ಲವ್ ಜಿಹಾದ್ ಮಾಡುವವರಿಗೆ ತ್ರಿಶೂಲದಿಂದ ಚುಚ್ಚಿ ಎಂದು ಕರೆ ಕೊಟ್ಟಿದ್ದಾರೆ. ನೇಹಾ ಹಿರೇಮಠ ಹತ್ಯೆಯಾಗಿ ಏ.18 ಕ್ಕೆ ಒಂದು ವರ್ಷ ಆಗುತ್ತೆ. ಅಂದು ಶ್ರೀರಾಮಸೇನೆ ಒಂದು ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಿದೆ. ಮಹಿಳೆಯರು ತಮ್ಮ ಬ್ಯಾಗ್‌ನಲ್ಲಿ ಈ ತ್ರಿಶೂಲ ಇಟ್ಟುಕೊಳ್ಳಲಿ. ಇಂತಹವರು ಯಾರಾದ್ರು ಬಂದ್ರೆ ಚುಚ್ಚಿ. ಅತ್ಯಾಚಾರಿಗಳು, ಕೊಲೆಗಡುಕರು, ಲವ್ ಜಿಹಾದ್ ಮಾಡುವವರಿಗೆ ಚುಚ್ಚಿ ಎಂದು ಕರೆ ನೀಡಿದ್ದಾರೆ.
ಕಾಂಗ್ರೆಸ್ ಮಹಿಳೆಯರ ರಕ್ಷಣೆ ಮಾಡುವುದಿಲ್ಲ. ಕಾಂಗ್ರೆಸ್ ಇರುವುದು ಮುಸ್ಲಿಂರ ರಕ್ಷಣೆಗೆ. ಕಾಂಗ್ರೆಸ್ ವೋಟ್ ಜೊಲ್ಲು ಸೋರಿಸುತ್ತದೆ. ಅನ್ಯಕೋಮಿನ ಯುವಕನ ಟಾರ್ಚರ್‌ನಿಂದ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಮುತಾಲಿಕ್ ಭೇಟಿಯಾದರು. ಯುವತಿ ಆರೋಗ್ಯದ ಬಗ್ಗೆ ವಿಚಾರಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು