ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು isro.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 75 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಗೊಂಡವರಿಗೆ ಮಾಸಿಕ 9 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ಕೂಡ ಸಿಗಲಿದೆ. ಏಪ್ರಿಲ್ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹತೆಗಳು ಏನೇನು?
ಗ್ರ್ಯಾಜುಯೇಟ್ ಅಪ್ರೆಂಟಿಸ್ ಟ್ರೈನಿ: ಯಾವುದೇ ಮಾನ್ಯತೆ ಪಡೆದ ವಿವಿಯಿಂದ ಬಿ.ಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು. (ಹುದ್ದೆಗಳು-46, ಮಾಸಿಕ ಸ್ಟೈಪೆಂಡ್-9 ಸಾವಿರ ರೂ.)
ಡಿಪ್ಲೋಮಾ ಅಪ್ರೆಂಟಿಸ್ ಟ್ರೈನಿ: ಸ್ಟೇಟ್ ಬೋರ್ಡ್ ನಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು. (ಹುದ್ದೆಗಳು-15, ಮಾಸಿಕ ಸ್ಟೈಪೆಂಡ್-8 ಸಾವಿರ ರೂ.)
ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್: ಮಾನ್ಯತೆ ಪಡೆದೆ ರಾಜ್ಯ ಶಿಕ್ಷಣ ಸಂಸ್ಥೆಯಿಂದ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪಡೆದಿರಬೇಕು. (ಹುದ್ದೆಗಳು-5, ಮಾಸಿಕ ಸ್ಟೈಪೆಂಡ್-8 ಸಾವಿರ ರೂ.)
ಟ್ರೇಡ್ ಐಟಿಐ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಐಟಿಐ ಪಡೆದಿರಬೇಕು. (ಹುದ್ದೆಗಳು-9, ಮಾಸಿಕ ಸ್ಟೈಪೆಂಡ್-7 ಸಾವಿರ ರೂ.)
2022, 2023 ಹಾಗೂ 2024ರಲ್ಲಿ ಕೋರ್ಸ್ ಮುಗಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿವರ ಪರಿಶೀಲಿಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ಮಾಡಿದ ಬಳಿಕ ಅಭ್ಯರ್ಥಿಗಳ ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ನೇಮಕಗೊಂಡ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ದಾಖಲೆ ಪರಿಶೀಲನೆಗೆ ಆಗಮಿಸುವ ಅಭ್ಯರ್ಥಿಗಳಿಗೆ ಪ್ರಯಾಣ ಭತ್ಯೆ ಇರುವುದಿಲ್ಲ.