ಬೆಂಗಳೂರು: ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ (ಎನ್ ಎಚ್ ಆರ್ ಸಿಎಲ್)ನಲ್ಲಿ ಜ್ಯೂನಿಯರ್ ಟೆಕ್ನಿಕಲ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳು (NHSRCL Recruitment 2025) ಸೇರಿ ವಿವಿಧ 71 ಹುದ್ದೆಗಳು ಖಾಲಿ ಇದ್ದು, ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 26ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಏಪ್ರಿಲ್ 15ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಬಿ.ಇ, ಬಿ.ಟೆಕ್, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಆಧಾರಿತ ಟೆಸ್ಟ್, ವೈಯಕ್ತಿಕ ಸಂದರ್ಶನ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವವರು www.nhsrcl.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಯಾವ ಹುದ್ದೆಗಳು ಎಷ್ಟು ಖಾಲಿ?
ಜ್ಯೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಸಿವಿಲ್) 35
ಜ್ಯೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಲೆಕ್ಟ್ರಿಕಲ್) 17
ಜ್ಯೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಸ್ ಆ್ಯಂಡ್ ಟಿ) 03
ಜ್ಯೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್) 04
ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್ (ಆರ್ಕಿಟೆಕ್ಚರ್) 08
ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್ (ಡೇಟಾಬೇಸ್ ಅಡ್ಮಿನ್) 01
ಅಸಿಸ್ಟಂಟ್ ಮ್ಯಾನೇಜರ್ (ಪ್ರೊಕ್ಯೂರ್ ಮೆಂಟ್) 01
ಅಸಿಸ್ಟಂಟ್ ಮ್ಯಾನೇಜರ್ (ಜನರಲ್) 01
ಜನರಲ್ ಕೆಟಗರಿಯವರು, ಒಬಿಸಿ, ಇಡಬ್ಲ್ಯೂಎಸ್ ವರ್ಗದವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಹಾಗೂ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆಯಾ ಹುದ್ದೆಗಳ ಅನುಸಾರವಾಗಿ ಮಾಸಿಕ 40 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. NHSRCL ನಿಯಮಗಳ ಅನ್ವಯ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ.