ಮಂಡ್ಯ: ಜಿಲ್ಲೆಯ(Mandya) ಪಾಂಡವಪುರ (Pandavapura) ತಾಲೂಕಿನ ಮೇಲುಕೋಟೆ (Melukote) ವೈರಮುಡಿ ಬ್ರಹ್ಮೋತ್ಸವ (Vairamudi Brahmotsava) ನಡೆಯುತ್ತಿದ್ದು, ಖಜಾನೆಯಿಂದ ಆಭರಣಗಳನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ತಂದರು.
ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ. ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ಬೆಳಗ್ಗೆ ಚಾಲನೆ ಸಿಕ್ಕಿದೆ. ಶ್ರೀದೇವಿ, ಭೂದೇವಿಯರ ಜೊತೆಗೆ ರತ್ನ ಖಚಿತ ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡಲಿದ್ದಾರೆ.
ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಹೊರರಾಜ್ಯದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಖಜಾನೆಯಿಂದ ಆಭರಣಗಳನ್ನು ಡಿಸಿ ಡಾ.ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಂದು ಹಸ್ತಾಂತರ ಮಾಡಿದ್ದಾರೆ.