ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.
ಕಲಾ ವಿಭಾಗದಲ್ಲಿ ಈ ಬಾರಿಯೂ ಬಳ್ಳಾರಿ ಜಿಲ್ಲೆ ಅಭೂತಪೂರ್ವ ಸಾಧನೆ ಮಾಡಿದೆ. ಅದರಲ್ಲೂ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜ್ ಕ್ರಮವಾಗಿ ಮೊದಲ ಎರಡು ಸ್ಥಾನಗಳನ್ನ ತನ್ನದಾಗಿಸಿಕೊಂಡಿದೆ. ಕಲಾ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಸಂಜನಾ ಬಾಯಿ ಸಾಧನೆ ಎಂಥವರಿಗೂ ಆದರ್ಶವಾಗುವಂತಿದೆ. ಈ ಬಾರಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕಗಳನ್ನು ಪಡೆದಿರುವ ಸಂಜನಾ ಲಾರಿ ಡ್ರೈವರ್ ಮಗಳು ಎನ್ನುವುದು ಪ್ರಶಂಸನೀಯ.
ಹತ್ತಾರು ಸವಾಲುಗಳನ್ನು ಮೆಟ್ಟಿ ನಿಂತು ಸಂಜನಾ ಈ ಸಾಧನೆ ಮಾಡಿದ್ದು ನಿಜಕ್ಕೂ ಕೇವಲ ಕಾಲೇಜಿಗಲ್ಲಾ ರಾಜ್ಯಕ್ಕೆ ಹೆಮ್ಮೆ ಎಂದು ಪಿಯು ಕಾಲೇಜು ಆಡಳಿತ ಮಂಡಳಿ ಕೊಂಡಾಡಿದೆ.



















