ಬೆಂಗಳೂರು: ಮುಡಾ ಪ್ರಕರಣದ ತಲೆ ನೋವು ಮಾಸುವ ಮುನ್ನವೇ ಸಿಎಂಗೆ ಮತ್ತೊಂದು ತಲೆ ಬಿಸಿ ಶುರುವಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಎಚ್.ರಾಮಮೂರ್ತಿಗೌಡ ಅರ್ಜಿ ಸಲ್ಲಿಸಿದ್ದಾರೆ. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ 500 ಕೋಟಿ ರೂ. ಕಿಕ್ ಬ್ಯಾಕ್ ಆರೋಪ ಮಾಡಿದ್ದಾರೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಗುತ್ತಿಗೆ ನವೀಕರಣ ಹೆಸರಿನಲ್ಲಿ 500 ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪ ಮಾಡಲಾಗಿದೆ.
2015ರಲ್ಲಿ ಸಿಎಂ ಸಿದ್ದರಾಮಯ್ಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದಾರೆ. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದಾರೆ. ನವೀಕರಣ ಮಾಡಿಕೊಟ್ಟಿದ್ದಕ್ಕೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಮಾಡಲಾಗಿದೆ.
ಸುಮಾರು 500 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಷನ್ ಅನುಮತಿ ಕೊಡಿ ಎಂದು ದೂರು ಸಲ್ಲಿಕೆಯಾಗಿದೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 227, 228, 229, 239, 314, 316 (5) 318 (1), 319, 322, 324 (2), 324 (3), 335, 336, 338, 340 ರ ಪೂರ್ವಾನುಮತಿ ನೀಡಿ ಎಂದು ಮನವಿ ಮಾಡಲಾಗಿದೆ.
ಈ ವೇಳೆ ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಸಾಲಿಸಿಟರ್ ಜನರಲ್ ಬಳಿ ಈ ಕುರಿತು ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯಪಾಲರು ಹೇಳಿದ್ದಾರೆ ಎನ್ನಲಾಗಿದೆ.