ಯಾದಗಿರಿ: ಸಾರಿಗೆ ಬಸ್(Bus) ಬಾಗೂ ಬೊಲೆರೋ ಮಧ್ಯೆ ಭೀಕರ ಅಪಘಾತ(Accident) ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.
ಈ ಘಟನೆ ಶಹಾಪುರ (Shahapur) ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸಾವನ್ನಪ್ಪಿದ ದುರ್ದೈವಿಗಳನ್ನು ಜಿಲ್ಲೆಯ ವರ್ಕನಹಳ್ಳಿ ಗ್ರಾಮದವರು ಎನ್ನಲಾಗಿದೆ. ಬೊಲೆರೋ ವಾಹನದಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50) ಮತ್ತು ತಂಗೆಮ್ಮ (55) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಘಟನೆ ನಡೆದ ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ಹೋಗುತ್ತಿದ್ದರು. ಆ ವೇಳೆ ಈ ದುರ್ಘಟನೆ ನಡೆದಿದೆ. ವಾಹನದಲ್ಲಿದ್ದ ಇನ್ನೂ ಹಲವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


















