ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಮೋಡ ಕವಿದ ವಾತಾವರಣವಿದ್ದು, ಈಗಾಗಲೇ ಶುಕ್ರವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗ ಏ. 17ರ ವರೆಗೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರಾವರ ಸಂಜೆ ವೇಳೆ ಬೆಂಗಳೂರು ನಗರದ ಹಲವೆಡೆ ತುಂತುರು ಮಳೆಯಾಗಿದೆ. ರಾಜಾಜಿನಗರ, ಮೆಜೆಸ್ಟಿಕ್, ಹೆಬ್ಬಾಳ್, ಯಲಹಂಕ ಸೇರಿದಂತೆ ಹಲವೆಡೆ ಮಳೆಯಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏ. 17ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.