ಬೆಂಗಳೂರು: ವ್ಯಕ್ತಿಯೋರ್ವ ಪತ್ನಿ ಕಿರುಕುಳಕ್ಕೆ ಬೇಸತ್ತು ರಾಜಭವನ (Raj Bhavan)ದ ಎದುರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನ (Bengaluru) ಆರ್.ಟಿ ನಗರದ ನಿವಾಸಿ ಎನ್ನಲಾಗಿದೆ. ಪತಿ ಹಾಗೂ ಪತ್ನಿಯ ಮಧ್ಯೆ ಹೊಂದಾಣಿಕೆ ಇಲ್ಲದ ಹಿನ್ನೆಲೆಯಲ್ಲಿ ವಿಕೋಪ ಹೆಚ್ಚಾಗಿದೆ. ಪತ್ನಿ ಮಾನಸಿಕವಾಗಿ ಕಿರುಕುಳ ನೀಡುತ್ತಾಳೆಂದು ಪತಿ ದೂರು ನೀಡಲು ಹೋಗಿದ್ದಾರೆ. ಆದರೆ, ಪೊಲೀಸರು ದೂರು ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಇದರಿಂದ ಬೇಸರಗೊಂಡ ವ್ಯಕ್ತಿ, “ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ, ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರನ್ನು ಆತನನ್ನು ರಕ್ಷಿಸಿದ್ದಾರೆ. ವಿಧಾನಸೌಧ ಪೊಲೀಸರು ವ್ಯಕ್ತಿಯನ್ನು ಕರೆದೊಯ್ದಿದ್ದಾರೆ. ವ್ಯಕ್ತಿಯು ಆತ್ಮಹತ್ಯೆಗೂ ಮುನ್ನ ಪುಟಗಟ್ಟಲೆ ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ.