ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿ(Caste Survey) ಭಾರೀ ಸದ್ದು ಮಾಡುತ್ತಿದೆ. ಈ ವೇಳೆ ಕಾಂಗ್ರೆಸ್ (Congress) ಪಾಳಯದಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಕೂಡ ಜಾತಿ ಗಣತಿ ವಿರೋಧಿಸಿದರಾ? ಎಂಬ ಪ್ರಶ್ನೆಯೊಂದು ಕಾಡುತ್ತಿದೆ.
ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ಸಭೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆದಿದ್ದಾರೆ. ತಮ್ಮ ಸರ್ಕಾರಿ ನಿವಾಸದಲ್ಲಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಜಾತಿ ಗಣತಿ ಸಂಬಂಧ ಏ.17 ರಂದು ಸಿಎಂ ಸಿದ್ದರಾಮಯ್ಯ ವಿಶೇಷ ಕ್ಯಾಬಿನೆಟ್ ಸಭೆಯನ್ನು ಕರೆದಿದ್ದಾರೆ. ಈ ಸಭೆಗೂ ಮುನ್ನ ಒಕ್ಕಲಿಗ ನಾಯಕರ ನಿಲುವು ಏನಿರಬೇಕೆಂದು ಡಿಕೆಶಿ ಅಭಿಪ್ರಾಯ ಸಂಗ್ರಹ ಮಾಡಲು ಈ ಸಭೆ ಕರೆದಿದ್ದಾರೆ. ಈ ಸಭೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.



















