ಧಾರವಾಡ: ನರೇಂದ್ರ ಮೋದಿ (Narendra Modi) ಇನ್ನೊಂದು ವರ್ಷ ಮಾತ್ರ ಪ್ರಧಾನಿಯಾಗಿರುತ್ತಾರೆ. ಸದ್ಯದಲ್ಲೇ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿಸುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿ (Dharwad) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಾರೂ ಪ್ರಯತ್ನ ನಡೆಸುತ್ತಿಲ್ಲ. ಯತ್ನಾಳ್ ಅವರು ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ (Siddaramaiah)ರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಸ್ವ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆಗೆ ತಿರುಗೇಟು ನೀಡಿದ್ದಾರೆ.



















