ಅಂಬೇಡ್ಕರ್ ಜಯಂತಿ ವೇಳೆ ಹಲವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡಿಜೆ ಸಾಂಗ್ ಗೆ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪರಿಣಾಮ ಕೆಲವರು ಗಾಯಗೊಂಡಿದ್ದಾರೆ. ಶಿವರಾಜ್ ಕರಿಗಾರ್, ಉಮೇಶ ಲಮಾಣಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.