ಚಿಕ್ಕಬಳ್ಳಾಪುರ: ಕಲ್ಯಾಣಿಯಲ್ಲಿ ಮುಳುಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು 30 ರಿಂದ 35 ವರ್ಷದ ಅಪರಿಚಿತ ಮಹಿಳೆಯ ಶವ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಕಲ್ಯಾಣಿಯಲ್ಲಿ ಪತ್ತೆಯಾಗಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೂತನವಾಗಿ ಉದ್ಘಾಟನೆಗೊಂಡಿರುವ ಕನ್ನಡ ಭವನದ ಪಕ್ಕದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.