ಮಂಡ್ಯ: ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಕದಬಹಳ್ಳಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲೂಕಿನ ಗದ್ದೇಹೊಸೂರು ಗ್ರಾಮದ ಶ್ವೇತಾ (38) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿದರಕ, ಗ್ರಾಮದ ನಾಗರಾಜು (45) ಸಾವನ್ನಪ್ಪಿದ ದಂಪತಿ.
ದಂಪತಿ ಜಾತ್ರೆ ಇದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.