ಬೆಂಗಳೂರು: ಆರೋಗ್ಯ ಇಲಾಖೆಯ ಕವಚ ಆಂಬುಲೆನ್ಸ್ ರಸ್ತೆಯಲ್ಲೇ ಕೆಟ್ಟು ನಿಂತಿರುವ ಘಟನೆ ನಡೆದಿದೆ.
ತುರ್ತು ಚಿಕಿತ್ಸೆಗೆ ಮಹಿಳೆಯನ್ನು ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಆಂಬುಲೆನ್ಸ್ ಕೆಟ್ಟು ನಿಂತಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳಾ ರೋಗಿಯನ್ನು ಆಂಬುಲೆನ್ಸ್ ನಲ್ಲಿ ಕರೆತರಲಾಗುತ್ತಿತ್ತು. ಹೊಸಕೋಟೆ ಸರ್ಕಾರಿ ಆಸ್ಪತ್ರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಮಾರ್ಗ ಮಧ್ಯೆ ಹೊಸಕೋಟೆ ಟೋಲ್ ಬಳಿ KA51 G 5166 ಸಂಖ್ಯೆಯ ಆಂಬುಲೆನ್ಸ್ ಕೆಟ್ಟು ನಿಂತಿದೆ.
ಕೆಟ್ಟು ನಿಂತ ಆಂಬುಲೆನ್ಸ್ ಸಿಬ್ಬಂದಿಯಿಂದಲೇ ಮತ್ತೊಂದು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಯಿತು. 20 ನಿಮಿಷಗಳ ನಂತರ ಸ್ಥಳಕ್ಕೆ ಮತ್ತೊಂದು ಆಂಬುಲೆನ್ಸ್ ಬಂದಿದೆ. ಆನಂತರ ಹೊಸಕೋಟೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸೂಚಿಸಿದ್ದಾರೆ. ಆದರೆ, ಮತ್ತೊಂದು ಆಂಬುಲೆನ್ಸ್ ಬರುವುದು ತಡವಾಗಿದ್ದರೆ, ಮಹಿಳೆಯ ಪ್ರಾಣಕ್ಕೆ ಕುತ್ತು ಬರುತ್ತಿತ್ತು.


















