ಹುಬ್ಬಳ್ಳಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ ನೇಮಕಗೊಂಡಿದ್ದಾರೆ.
ಗುರುವಾರ ಹುಬ್ಬಳ್ಳಿಯಲ್ಲಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಟ್ರಸ್ಟ್ ಪದಾಧಿಕಾರಿಗಳಿಂದ ಸರ್ವಾನುಮತದಿಂದ ಟ್ರಸ್ಟ್ ಪದಾಧಿಕಾರಿಗಳು ಆಯ್ಕೆ ಮಾಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪ್ರಭಣ್ಣ ಹುನಸಿಕಟ್ಟಿ, ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಶಾಸಕ ವಿಜಯಾನಂದ ಕಾಶಪ್ಪನವರ ಈಗಾಗಲೇ ಪಂಚಮಸಾಲಿ ಪೀಠದ ಜಗದ್ಗುರು ಜಯ ಮೃತ್ಯುಂಜಯ ಶ್ರೀ ವಿರುದ್ಧ ಸಿಡಿದೆದ್ದಿದ್ದಾರೆ.



















