ಬೆಳಗಾವಿ: ಸವದತ್ತಿ ಪಟ್ಟಣದ ಯಲ್ಲಮ್ಮ ರೇಣುಕಾ ದೇವಿ ಆವರಣದಲ್ಲಿನ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ, ತೆರವು ಕಾರ್ಯಾಚರಣೆ ವಿರೋಧಿಸಿ ರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿ ಮುತ್ತಿಗೆಗೆ ಜನರು ಯತ್ನಿಸಿದ್ದಾರೆ.
ಪ್ರಾಧಿಕಾರದ ಆಯುಕ್ತ ಅಶೋಕ ದುಡಗುಂಟಿ ಅವರನ್ನು ದೇಗುಲದಲ್ಲಿ ಕೂಡಿಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಧಿಕೃತ ಅಂಗಡಿಗಳನ್ನು ತೆರವು ಮಾಡದಂತೆ ಆಯಕ್ತರ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.



















