ಆನೇಕಲ್: ಬಿಎಂಟಿಸಿ ಬಸ್ವೊಂದು (BMTC) ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನ ಜಿಗಿಣಿಯಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ಬೆಳಗ್ಗೆ ಬನ್ನೇರಘಟ್ಟದಿಂದ ಜಿಗಣಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿ ಬೇಕರಿಗೆ ನುಗ್ಗಿದೆ. ಆದರೆ, ಗ್ರಾಹಕರಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಚಾಲಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.