ಬೆಂಗಳೂರು: ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಕೂಡ ವಿಚಾರಣೆ ನಡೆಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಪತ್ನಿ ಪಲ್ಲವಿ, ಮಗಳು ಕೃತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದರು.
ಮೆಡಿಕಲ್ ಟೆಸ್ಟ್ ಮಾಡಿಸಿ ಪೊಲೀಸರು ಕರೆ ತಂದಿದ್ದಾರೆ. ಇಂದು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ. ಆನಂತರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಮಧ್ಯಾಹ್ನದ ನಂತರ ಪೊಲೀಸರು ತಾಯಿ ಹಾಗೂ ಮಗಳನ್ನು 39ACJM ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.



















