ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕ ಇಡೀ ವಿಶ್ವವೇ ಕೆಂಡಾಮಂಡಲವಾಗಿದ್ದು, ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಪಹಲ್ಗಾಮ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರ ಹಿನ್ನೆಲೆಯಲ್ಲಿ 30ಕ್ಕೂ ಅಧಿಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳ ಮೇಲೆ ಕಣ್ಣಿಡಲಾಗಿದೆ.
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಬೆನ್ನಲ್ಲೇ ಮುಂಬೈ ಮತ್ತು ದೆಹಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಮುಂಬೈ ಮತ್ತು ದೆಹಲಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.



















