ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿದ್ದು, ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಈ ವೇಳೆ ಹೆಚ್ಚುವರಿ ವಿಮಾನಗಳ ವ್ಯವಸ್ಥೆ ಮಾಡಲು ಮಾತುಕತೆ ನಡೆಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಎರಡು ವಿಶೇಷ ವಿಮಾನ ನಿಯೋಜನೆ ಮಾಡಲಾಗಿದೆ.
ಕರ್ನಾಟಕದ ಜನ ಸಿಲುಕಿರುವವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ. ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ. ಪ್ರಧಾನಿಗಳ ಕಚೇರಿ, ಗೃಹ ಸಚಿವರ ಕಚೇರಿಯ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕರ್ನಾಟಕದವರನ್ನು ಸುರಕ್ಷಿತರಾಗಿ ಹಿಂದಿರುಗಿಸಲು ವ್ಯವಸ್ಥೆ ನಡೆಯುತ್ತಿದೆ.
ಗ್ರಾಹಕ ವ್ಯವಹಾರಗಳ ಸಚಿವರಾಗಿ ವೈಮಾನಿಕ ಟಿಕೆಟ್ ದರಕ್ಕೆ ಬ್ರೇಕ್ ಬಿದ್ದಿದೆ. ಈ ಪರಿಸ್ಥಿತಿಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.



















