ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ (Pahalgam Attack) ನಡೆದ ಉಗ್ರ ದಾಳಿಯನ್ನು ಇಡೀ ವಿಶ್ವವೇ ಖಂಡಿಸಿದೆ. ಘಟನೆಯಲ್ಲಿ 26 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಪ್ರತಿಕಾರಕ್ಕಾಗಿ ಭಾರತ ಕಾಯುತ್ತಿದೆ.
ಗಾಗಲೇ ಪಾಕಿಸ್ತಾನ ವಿರುದ್ಧ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಉಗ್ರರ ದಾಳಿ ಸಂಬಂಧ ಮುಂದಿನ ನಡೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.
ಈ ಸರ್ವ ಪಕ್ಷಗಳ ಸಭೆಯಲ್ಲಿ ಮಹತ್ವದ ಅಂಶಗಳನ್ನು ಚರ್ಚಿಸಲಾಗಿದೆ. ಯಾವುದೇ ಕ್ರಮ ಕೈಗೊಂಡರೂ ತಮ್ಮ ಬೆಂಬಲವಿದೆ ಎಂದು ವಿರೋಧ ಪಕ್ಷಗಳ ನಾಯಕರು ತಿಳಿಸಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಉಗ್ರರಿಗೆ ಹಾಗೂ ಭಯೋತ್ದಾದರಿಗೆ ನೆರವು ನೀಡುವವರಿಗೆ ತಕ್ಕ ಶಾಸ್ತಿ ಆಗಲಿದೆ ಎಂದು ಖಡಕ್ ವಾರ್ನ್ ಮಾಡಿದ್ದಾರೆ. ದೇಶದ ಶತ್ರುಗಳು ಭಾರತದ ಆತ್ಮದ ಮೇಲೆ ದಾಳಿ ಮಾಡುವ ಸಾಹಸ ಮಾಡಿವೆ. ನಾನು ತುಂಬಾ ಸ್ಪಷ್ಟವಾಗಿ ಹೇಳುತ್ತೇನೆ. ಯಾರು ಈ ದಾಳಿ ಮಾಡಿದ್ದಾರೋ ಆ ಉಗ್ರರನ್ನು.. ಈ ದಾಳಿಗೆ ಸಂಚು ಮಾಡಿದವರಿಗೆ ಅವರ ಕಲ್ಪನೆಗೂ ಮೀರಿದ್ದ ಶಿಕ್ಷೆಯನ್ನ ನೀಡುತ್ತೇವೆ. ಶಿಕ್ಷೆ ಆಗೇ ಆಗುತ್ತೆ ಎಂದಿದ್ದಾರೆ. ಹೀಗಾಗಿ ಪಾಕ್ ಗಡಿಯಲ್ಲಿ ಸೇನೆ ನಿಯೋಜಿಸಿದೆ.



















