ಬೆಂಗಳೂರು: ನಗರದಲ್ಲಿ ಟೆಕ್ಕಿ(Techie)ಯೋರ್ವ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದು ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ.
ಬನಶಂಕರಿ ಪೋಲಿಸ್ (Banashankari Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್(45) ಹಲ್ಲೆ ಮಾಡಿರುವ ವ್ಯಕ್ತಿ ಎನ್ನಲಾಗಿದೆ. ಶ್ರೀಕಾಂತ್ ಮದುವೆಯಾಗಿದ್ದರೂ ತನ್ನ ಮನೆಯಲ್ಲಿ ಬಾಡಿಗೆ ಇದ್ದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆ ಯುವತಿ ಕಾಲೇಜಿಗೆ ಹೋಗುತ್ತಿದ್ದಳು. ಶ್ರೀಕಾಂತ್ ನ ವರ್ತನೆಗೆ ಬೇಸತ್ತು ಆತನ ಹೆಂಡತಿಗೆ ವಿಷಯ ಮುಟ್ಟಿಸಿದ್ದಾಳೆ. ಆದರೂ ಆತನ ಕಾಟ ಮಾತ್ರ ತಪ್ಪಿಲ್ಲ ಎನ್ನಲಾಗಿದೆ.
ಇತ್ತೀಚೆಗೆ ಯುವತಿ ಬೇರೊಬ್ಬ ಯುವಕನೊಟ್ಟಿಗೆ ನಿಂತಿರುವುದನ್ನು ಕಂಡು ಚಾಕುವಿನಿಂದ ಇರಿದಿದ್ದಾನೆ. ಯುವತಿ ಗಾಯಗೊಂಡಿದ್ದು, ಶ್ರೀಕಾಂತ್ ವಿರುದ್ಧ ದೂರು ದಾಖಲಿಸಿದ್ದಾಳೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



















